ನೊಂದಾಯಿತ ರೈತರಿಂದ ರಾಗಿ ಖರೀದಿ ಪ್ರಕ್ರಿಯೆ ಆರಂಭ
ಬೆಂಗಳೂರು ಗ್ರಾಮಾಂತರ ಜಿಲ್ಲೆ,:
ಕನಿಷ್ಠ ಬೆಂಬಲ ಯೋಜನೆಯಡಿ ಈಗಾಗಲೇ ನೊಂದಾಯಿಸಿಕೊಂಡು ರಾಗಿ ನೀಡಲು ಬಾಕಿ ಇರುವ ರೈತರಿಂದ ರಾಗಿ ಖರೀದಿಸುವ ಪ್ರಕ್ರಿಯೆ ಆರಂಭಗೊಂಡಿದ್ದು, ಮೇ 30 ರ ವರೆಗೆ ಖರೀದಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 10,701 ರೈತರು ರಾಗಿ ಖರೀದಿ ಕೇಂದ್ರದಲ್ಲಿ ನೊಂದಾಯಿಸಿಕೊಂಡಿದ್ದು, 7,517 ರೈತರು ರಾಗಿಯನ್ನು ಖರೀದಿ ಕೇಂದ್ರಕ್ಕೆ ನೀಡಿದ್ದಾರೆ. ಉಳಿದಂತೆ 3,184 ರೈತರು ಖರೀದಿ ಕೇಂದ್ರಕ್ಕೆ ರಾಗಿಯನ್ನು ನೀಡಬೇಕಿದ್ದು, ರೈತರಿಂದ ರಾಗಿ ಖರೀದಿ ಮಾಡಲು ಸಾಕಷ್ಟು ಕಾಲಾವಕಾಶವನ್ನು ನೀಡಲಾಗಿದೆ. ಕೊರೋನಾ ವೈರಾಣು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಜನಜಂಗುಳಿ ತಪ್ಪಿಸಲು ಖರೀದಿ ಕೇಂದ್ರ ಅಧಿಕಾರಿಗಳು ರೈತರಿಗೆ ನಿರ್ದಿಷ್ಟ ದಿನಾಂಕವನ್ನು ಗುರುತು ಮಾಡಿ ದೂರವಾಣಿ ಕರೆ ಅಥವಾ ಎಸ್ಎಮ್ಎಸ್ ಮೂಲಕ ಮಾಹಿತಿ ನೀಡಬೇಕು ಎಂದು ತಿಳಿಸಲಾಗಿದೆ.
ಖರೀದಿ ಕೇಂದ್ರಕ್ಕೆ ಬರುವ ರೈತರಿಗೆ ಅನ್ವಯವಾಗುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಪೂರ್ವಭಾವಿಯಾಗಿ ಮಾಹಿತಿಯನ್ನು ನೀಡಿ ಪ್ರತ್ಯೇಕ ಪಾಸ್ ವ್ಯವಸ್ಥೆ ಕಲ್ಪಿಸಬೇಕು. ಕೃಷಿ ಇಲಾಖೆಯ ಜಂಟಿ ನಿರ್ದೇಶಕರು, ಉಪ ನಿರ್ದೇಶಕರು ಹಾಗೂ ಎಲ್ಲಾ ತಾಲ್ಲೂಕಿನ ಸಹಾಯಕ ನಿರ್ದೇಶಕರುಗಳು ಸ್ಥಳೀಯವಾಗಿ ರೈತ ಸಂಪರ್ಕ ಕೇಂದ್ರವನ್ನು ತೆರೆದು ರೈತರಿಗೆ ಅನಾನುಕೂಲವಾಗದಂತೆ ಕ್ರಮವಹಿಸಬೇಕು.
ಖರೀದಿ ಕೇಂದ್ರಕ್ಕೆ ಬರುವ ರೈತರು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಅಗತ್ಯ ಪ್ರಮಾಣದಲ್ಲಿ ಸ್ಯಾನಿಟೈಜರ್ ಇಟ್ಟುಕೊಳ್ಳುವ ಮೂಲಕ ಖರೀದಿ ಕೇಂದ್ರಕ್ಕೆ ಬರುವ ರೈತರು ಮತ್ತು ಸಿಬ್ಬಂದಿಗಳ ಉಪಯೋಗಕ್ಕೆ ನೀಡಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Bangalore Hot News

0 Comments
Please share your comment