ಜಿಲ್ಲೆಯ ಗಡಿಗಳನ್ನು ಬಂದ್
ಜಿಲ್ಲೆಯ ಅಕ್ಕಪಕ್ಕದ ಕಲಬುರಗಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಹಾಗೂ ಪಕ್ಕದ ಮಹಾರಾಷ್ಟ್ರ ರಾಜ್ಯದಲ್ಲಿ ಹೆಚ್ಚು ಕೊರೋನಾ ಸೋಂಕಿತ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಗಡಿ ಜಿಲ್ಲೆಗಳಿಂದ ಖಾಸಗಿ/ಸರಕಾರಿ ವಾಹನಗಳ ಮೂಲಕ ಜನರ ಆಗಮನ ಮತ್ತು ನಿರ್ಗಮನವನ್ನು ತಡೆಗಟ್ಟುವುದಕ್ಕಾಗಿ ಜಿಲ್ಲೆಯ ಗಡಿಗಳನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ.
ಸಾಮಾನುಗಳ ಸಾಗಾಣಿಕೆ, ಅಂಬ್ಯೂಲೆನ್ಸ್ ಮತ್ತು ಅಗತ್ಯ ವಸ್ತುಗಳ ಸಾಗಾಣಿಕೆ ವಾಹನಗಳಿಗೆ ಅನ್ವಯಿಸುವುದಿಲ್ಲ. ಅಲ್ಲದೆ ತುರ್ತು ಸಂದರ್ಭಗಳಲ್ಲಿ ಇತರೆ ವಾಹನಗಳ ಸಾಗಾಣಿಕೆಗಾಗಿ ಅನುಮತಿಯನ್ನು ತಹಶೀಲದಾರರು ಮತ್ತು ಆರಕ್ಷಕ ವೃತ್ತ ನಿರೀಕ್ಷಕರು ಜಂಟಿಯಾಗಿ ಅನುಮತಿಯನ್ನು ನೀಡುವುದು ಹಾಗೂ ಈ ಆದೇಶವನ್ನು ಜಾರಿಗೆ ತರುವಲ್ಲಿ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿ.ಪಂ ಸಿಇಒ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಆಯಾ ತಾಲೂಕಿಗೆ ನಿಯೋಜಿಸಲಾದ ತಾಲೂಕಾ ನೋಡಲ್ ಅಧಿಕಾರಿಗಳು, ಉಪ ವಿಭಾಗಾಧಿಕಾರಿಗಳು ವಿಜಯಪುರ/ಇಂಡಿ, ಜಿಲ್ಲೆಯ ಎಲ್ಲ ತಹಶೀಲದಾರರು, ಜಿಲ್ಲೆಯ ಎಲ್ಲ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಜವಾಬ್ದಾರರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Bangalore Hot News
0 Comments
Please share your comment