ಸಾಹಿತಿ, ಕಲಾವಿದರಿಗೆ ಆರ್ಥಿಕ ನೆರವು : ಅರ್ಜಿ ಆಹ್ವಾನ


cultur


ಬಾಗಲಕೋಟೆ: ಏಪ್ರೀಲ್ 22 :

ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಕೋವಿಡ್-19 ಕೊರೊನಾ ರೋಗಾಣುವಿನ ನಿಯಂತ್ರಣಕ್ಕೆ ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು, ಸಾಹಿತಿಗಳಿಗೆ 2 ಸಾವಿರ ರೂ.ಗಳ ಆರ್ಥಿಕ ಸಹಾಯ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸುವವರು ಆರ್ಥಿಕ ಸಂಕಷ್ಟದಲ್ಲಿರುವ ಎಲ್ಲಾ ಕಲಾ ಪ್ರಕಾರದ ಕಲಾವಿದರು, ಸಾಹಿತಿಗಳು 10 ವರ್ಷ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರಬೇಕು. ವೃತ್ತಿನಿರತರ ಕಲಾವಿದರಾಗಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿ ಇರುವವರಾಗಿರಬೇಕು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಮಾಸಾಶನ ಪಡೆಯುತ್ತಿರುವವರು ಇದಕ್ಕೆ ಅರ್ಹರಿರುವುದಿಲ್ಲ. ಸರ್ಕಾರಿ ನೌಕರರಾಗಿರಬಾರದು. ರಾಜ್ಯ, ಕೇಂದ್ರ, ನಿಗಮ ಮಂಡಳಿ, ಸರ್ಕಾರಿ ಅನುದಾನಿತ ಸಂಸ್ಥೆಗಳು ಮತ್ತು ಅರೆ ಸರ್ಕಾರಿ ಸಂಸ್ಥೆಗಳ ನೌಕರರಾಗಿರಬಾರದು.

ಅರ್ಹ ಕಲಾವಿದರು, ಸಾಹಿತಿಗಳು ತಮ್ಮ ಹೆಸರು, ವಿಳಾಸ, ಆಧಾರ ಸಂಖ್ಯೆ, ದೂರವಾಣಿ ಸಂಖ್ಯೆ ಮತ್ತು ಬ್ಯಾಂಕ್ ವಿವರಗಳೊಂದಿಗೆ ಮಾಹಿತಿಯನ್ನು ಬಾಗಲಕೋಟೆ ಸಹಾಯಕರ ನಿರ್ದೇಶಕರ ಕಚೇರಿಯ dkc.bagalkote@gmail.com ಮತ್ತು ವಾಟ್ಸಾಪ್ ನಂಬರ 9945367801, 9901433700 ಮುಖಾಂತರ ಇಲ್ಲವೇ ಖುದ್ದಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಇಲಾಖೆಗೆ ತಮ್ಮ ಸ್ವವಿವರವನ್ನು ತಲುಪಿಸಬೇಕು. ತಪ್ಪು ಅಥವಾ ಸುಳ್ಳು ಮಾಹಿತಿ ನೀಡಿ ಇದರ ಲಾಭ ಪಡೆಯಲು ಯತ್ನಿಸುವವರ ಮೇಲೆ ವಿಪತ್ತು ನಿರ್ವಹಣಾ ಅಧಿನಿಯ ಮದನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಪ್ರಕಟಣೆ ತಿಳಿಸಿದೆ.


Bangalore Hot News