ಉಸಿರಾಟ, ಶೀತಜ್ವರ ಪ್ರಕರಣಗಳನ್ನು ಜ್ವರ ತಪಾಸಣಾ ಕೇಂದ್ರಕ್ಕೆ ಕಳುಹಿಸಿ-ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್

yadagiri


ಯಾದಗಿರಿ.

ಜಿಲ್ಲೆಯ ಎಲ್ಲಾ ಖಾಸಗಿ ವೈದ್ಯರು ತಮ್ಮ ಆಸ್ಪತ್ರೆ/ದವಾಖಾನೆಗಳಿಗೆ ಬರುವ ತೀವ್ರ ಉಸಿರಾಟದ ಸೋಂಕಿನ ಹಾಗೂ ಶೀತಜ್ವರ ಪ್ರಕರಣಗಳನ್ನು ಕಡ್ಡಾಯವಾಗಿ ನೂತನ ಜಿಲ್ಲಾಸ್ಪತ್ರೆಯಲ್ಲಿ ಆರಂಭಿಸಿರುವ ಕೋವಿಡ್-19 ಆಸ್ಪತ್ರೆ ಹತ್ತಿರದ ಜ್ವರ ತಪಾಸಣಾ ಕೇಂದ್ರಕ್ಕೆ ಕಳುಹಿಸುವಂತೆ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಸೂಚಿಸಿದರು.

ಜಿಲ್ಲಾಧಿಕಾರಿಗಳಾದ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲೆಯ ಖಾಸಗಿ ವೈದ್ಯರು, ಔಷಧಿ ವಿತರಕರು ಹಾಗೂ ಆರ್.ಎಮ್.ಪಿ ಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.

ಜಿಲ್ಲೆಯ ಎಲ್ಲಾ ಔಷಧಿ ವಿತರಕರು ವೈದ್ಯರ ಔಷಧಿ ಚೀಟಿ ಇಲ್ಲದೇ ಯಾವುದೇ ತರಹದ ಔಷಧಿಯನ್ನು ನೀಡಬಾರದು. ಶೀತಜ್ವರ  ಪ್ರಕರಣಗಳನ್ನು ಸಂಬಂಧಪಟ್ಟ ತಾಲ್ಲೂಕಿನ ವೈದ್ಯಾಧಿಕಾರಿಗಳ ಗಮನಕ್ಕೆ ತರಲು ಅವರು ಸೂಚಿಸಿದರು.




ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ಯಾವುದೇ ಮದ್ದು ಇಲ್ಲದೇ ಇರುವುದರಿಂದ ಜಿಲ್ಲೆಯ ಆರ್.ಎಮ್.ಪಿ ಗಳು ವೈದ್ಯಕೀಯ ತಪಾಸಣೆಯನ್ನು ಸ್ಥಗಿತಗೊಳಿಸಬೇಕು ಹಾಗೂ ಯಾವುದೇ ಕಾಯಿಲೆ ಇರುವ ವ್ಯಕ್ತಿ ಕಂಡುಬಂದಲ್ಲಿ ನೇರವಾಗಿ ತಾಲ್ಲೂಕು ವ್ಯೆದ್ಯಾಧಿಕಾರಿಗಳಿಗೆ ತಿಳಿಸಬೇಕು ಹಾಗೂ ಕೋವಿಡ್-19 ರೋಗದ ಕುರಿತು ಅರಿವು ಮೂಡಿಸಬೇಕು ಎಂದು ಅವರು ತಿಳಿಸಿದರು.

ಖಾಸಗಿ ವೈದ್ಯರು ಹಾಗೂ ಆರ್.ಎಮ್.ಪಿ ಗಳು ಜಿಲ್ಲಾಡಳಿತದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಒಂದು ವೇಳೆ ಸದರಿ ಸೂಚನೆಗಳನ್ನು ನಿಲ್ರ್ಯಕ್ಷಿಸಿದಲ್ಲಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯದಂತೆ ನಿಯಮಾನುಸಾರ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಮುಕ್ಕಣ್ಣ ಕರಿಗಾರ, ಜಿಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ್, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ನಾರಾಯಣಪ್ಪ, ಡಾ.ಭಗವಂತ ಅನವಾರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಿವೇಕಾನಂದ ಟೆಂಗೆ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.



Bangalore Hot News