ಕೋವಿಡ್-19 ಮುನ್ನೆಚ್ಚರಿಕೆಯಾಗಿ ಮಾಧ್ಯಮ ಪ್ರತಿನಿಧಿಗಳ ಗಂಟಲು ದ್ರವ ಮಾದರಿ ಸಂಗ್ರಹ


vijayapur


ವಿಜಯಪುರ 

ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಸಹಯೋಗದಲ್ಲಿ ಇಂದು ನಗರದ ಜಿಲ್ಲಾ ಸವೇಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳಿಗಾಗಿ ಕೋವಿಡ್-19 ಮುನ್ನೆಚ್ಚರಿಕೆಯಾಗಿ ವೈದ್ಯಕೀಯ ತಪಾಸಣೆ ಅಂಗವಾಗಿ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಲಾಯಿತು.

ಜಿಲ್ಲಾ ಕೇಂದ್ರದ 28 ಜನ ಮಾಧ್ಯಮ ಪ್ರತಿನಿಧಿಗಳ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಗೆ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ.

ಅದರಂತೆ ನಾಳೆ ಬೆಳಿಗ್ಗೆ 11.30 ರಿಂದ ಸಂಜೆ 4.00 ಗಂಟೆಯವರೆಗೆ ಈ ಶಿಬಿರ ಆಯೋಜಿಸಲಾಗಿದ್ದು, ಜಿಲ್ಲಾ ಕೇಂದ್ರದಲ್ಲಿರುವ ಸಮೂಹ ಮಾಧ್ಯಮದ ಪ್ರತಿನಿಧಿಗಳು ಇದರ ಸದುಪಯೋಗ ಪಡೆಯಬಹುದಾಗಿದೆ. ಸರ್ಕಾರದ ನಿರ್ದೇಶನದಂತೆ ಜಿಲ್ಲಾ ಕೇಂದ್ರದ ಮಾಧ್ಯಮ ಪ್ರತಿನಿಧಿಗಳ ಗಂಟಲು ದ್ರವ ಮಾದರಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರ ನಿರ್ದೇಶನದಂತೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ಎಂ.ಬಿ ಬಿರಾದಾರ ನೇತೃತ್ವದ ಹಿರಿಯ ಮತ್ತು ಕಿರಿಯ ಪ್ರಯೋಗಶಾಲಾದ ಸುಮಾರು 24ಕ್ಕೂ ಹೆಚ್ಚು ಟೆಕ್ನಾಲಾಜಿಸ್ಟ್‍ಗಳ ತಂಡದ ಮೂಲಕ ಈ ಕಾರ್ಯವನ್ನು ನೆರವೇರಿಸಲಾಯಿತು.ಸರಳವಾಗಿ ನಟ ಸಾರ್ವಭೌಮ ಡಾ.ರಾಜ್‍ಕುಮಾರ್ ಜನ್ಮದಿನ ಆಚರಣೆ

vijayapur

ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಟ ಸಾರ್ವಭೌಮ ಡಾ.ರಾಜ್‍ಕುಮಾರ್ ಅವರ ಜಯಂತಿ ಕಾರ್ಯಕ್ರಮವನ್ನು ಕೋವಿಡ್-19 ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಾರ್ತಾ ಇಲಾಖೆ ಸಹಾಯಕ ನಿರ್ದೇಶಕರಾದ ಶ್ರೀ ಸುಲೇಮಾನ್ ನದಾಫ್, ಅಪ್ರೇಂಟಿಶಿಪ್ ಆನಂದ ರಾಠೋಡ, ಡಿ ಗ್ರೂಪ್ ನೌಕರ ಶಿವಾನಂದ ಹಿಳ್ಳಿ ಅವರು ಉಪಸ್ಥಿತರಿದ್ದು, ಡಾ.ರಾಜ್‍ಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಅರ್ಪಿಸಿದರು.


Bangalore Hot News