ಅರ್ಚಕ ನಾರಾಯಣ ಆಚಾರ್ ಮೃತದೇಹ ಪತ್ತೆ..!
ಸತತ ಆರು ದಿನಗಳಿಂದ ಎನ್ಡಿಆರ್ಎಫ್, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಶೋಧ ನಡೆಸುತ್ತಿದ್ದು. ಇಂದು ಮಧ್ಯಾಹ್ನ ತಲಕಾವೇರಿಯ ಬ್ರಹ್ಮಗಿರಿಯಲ್ಲಿ ಬೆಟ್ಟ ಕುಸಿದು ಕಣ್ಮರೆಯಾಗಿದ್ದ ಆರು ದಿನಗಳ ನಂತರ ಅರ್ಚಕರ ದೇಹ ಪ್ರಪಾತದಲ್ಲಿ ಪತ್ತೆಯಾಗಿದೆ. ದೇವಸ್ಥಾನದಿಂದ ಅರ್ಧ ಕಿ.ಮೀ ದೂರದಲ್ಲಿ ಮಣ್ಣಿನ ಅಡಿಯಲ್ಲಿ ಹೂತುಹೋಗಿದ್ದ ಅವರ ದೇಹವನ್ನು ಹೊರತೆಗೆಯಲಾಗಿದೆ.
ಕಾರ್ಯಾಚರಣೆ ಸ್ಥಳದಲ್ಲಿ ನಾರಾಯಣ ಆಚಾರ್ ಅವರ ಪುತ್ರಿಯರಾದ ಶಾರದಾ ಮತ್ತು ನಮಿತ ಕೂಡ ಇದ್ದಾರೆ. ಇಂದು ನಾರಾಯಣ ಆಚಾರ್ ಅವರಿಗೆ ಸೇರಿದ ಎರಡು ಕಾರು, ಬೈಕ್, ನಾರಾಯಣ ಆಚಾರ್ ಅವರ ಮನೆ ನಾಯಿ ಮೃತದೇಹವೂ ಪತ್ತೆಯಾಗಿದೆ.
ಸಚಿವ ವಿ. ಸೋಮಣ್ಣ, ಶಾಸಕ ಕೆ ಜಿ ಬೋಪಯ್ಯ ,ಸಂಸದ ಪ್ರತಾಪ್ ಸಿಂಹ ,ಶಾಸಕ ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಅನೀಶ್ ಕಣ್ಮಣಿ ಜಾಯ್, ಪೊಲೀಸ್ ವರಿಷ್ಠಾಧಿಕಾರಿ ಕ್ಷಮ ಮಿಶ್ರ ಅವರಿದ್ದು, ಕಾರ್ಯಾಚರಣೆಗೆ ಮಾರ್ಗದರ್ಶನ ನೀಡುತ್ತಿದ್ದಾರೆ.
0 Comments
Please share your comment