BHN

ಕಲಬುರಗಿ.ಆ.19: ಕೊರೋನಾ ಸೋಂಕಿನಿಂದ ಕಲಬುರಗಿ ನಗರದ ಮೂವರು ನಿಧನವಾಗಿರುವ ಬಗ್ಗೆ ಬುಧವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 175ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.

ತೀವ್ರ ಉಸಿರಾಟ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡ ಹಾಗೂ ನ್ಯುಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಕಲಬುರಗಿಯ ರಾಮನಗರದ 73 ವರ್ಷದ ವೃದ್ಧ (P-213059) ಆ.14 ರಂದು ಆಸ್ಪತ್ರೆಗೆ ದಾಖಲಾಗಿ ಆ.18 ರಂದು ನಿಧನರಾಗಿದ್ದಾರೆ.

ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಹಾಗೂ ನ್ಯುಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಕಲಬುರಗಿ ತಾಲೂಕಿನ ಶರಣಸಿರಸಗಿಯ 65 ವರ್ಷದ ವೃದ್ಧ (P-223866) ಆ.14 ರಂದು ಆಸ್ಪತ್ರೆಗೆ ದಾಖಲಾಗಿ ಆ.17 ರಂದು ನಿಧನ ಹೊಂದಿದ್ದಾರೆ.

ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಹಾಗೂ ನ್ಯುಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಕಲಬುರಗಿ ನಗರದ ಆಳಂದ‌ ಚೆಕ್ ಪೋಸ್ಟ್ ಹತ್ತಿರದ 55 ವರ್ಷದ ಪುರುಷ (P-230000) ಆ.15 ರಂದು ಆಸ್ಪತ್ರೆಗೆ ದಾಖಲಾಗಿ ಆ.17 ರಂದು ನಿಧನ ಹೊಂದಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.

Bangalore Hot News