ಬೆಂಗಳೂರು:   ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನಾಚರಣೆ ಅಗವಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ರಾಜೀವ್ ಗಾಂಧಿ ಹಾಗೂ ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು.
ಕಾರ್ಯಾಧ್ಯಕ್ಷರುಗಳಾದ ಈಶ್ವರ ಖಂಡ್ರೆ, ಸಲೀಂ ಅಹ್ಮದ್, ಸತೀಶ್ ಜಾರಕಿಹೊಳಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಂಸದ ಜಿ.ಸಿ ಚಂದ್ರಶೇಖರ್, ಮಾಜಿ ಸಚಿವರಾದ ಹೆಚ್.ಕೆ ಪಾಟೀಲ್, ಹೆಚ್.ಎಂ ರೇವಣ್ಣ, ಮಾಜಿ ಸಂಸದ ಕೆ.ಹೆಚ್ ಮುನಿಯಪ್ಪ, ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ನಾಯಕರ ಉಪಸ್ಥಿತಿ.

Bangalore Hot News