ಡಿಜೆ ಹಳ್ಳಿ ಗಲಭೆ ಪ್ರಕರಣ - 165ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ ಪೊಲೀಸರು

BHN

ಬೆಂಗಳೂರು : ಮಂಗಳವಾರ ರಾತ್ರಿ ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೂರಕ್ಕೂ ಅಧಿಕ ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿ.ಜೆ ಹಳ್ಳಿ ಘಟನೆಗೆ ಸಂಬಂಧಿಸಿದಂತೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿ ನವೀನ್ ನನ್ನು ದಸ್ತಗಿರಿ ಮಾಡಲಾಗಿದೆ. ಜೊತೆಗೆ ಬೆಂಕಿ ಹಚ್ಚಿದ, ಕಲ್ಲು ತೂರಾಟ ನಡೆಸಿದ, ಪೊಲೀಸರ ಮೇಲೆ ಹಲ್ಲೆ ನಡೆಸಿದ ಇತರೆ 110 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.\

ಈ ಸಂಖ್ಯೆ ಗಂಟೆಯಿಂದ ಗಂಟೆಗೆ ಏರುತ್ತಿದೆ.
ಈ ನಡುವೆ ಗಲಭೆ ಪೀಡಿತ ಪ್ರದೇಶ ಬೂದಿ ಮುಚ್ಚಿದ ಕೆಂಡದಂತಿದ್ದು, ಇಡೀ ಪ್ರದೇಶವನ್ನು ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ. ಗಲ್ಲಿ ಗಲ್ಲಿಯಲ್ಲೂ ಖಾಕಿ ಪಡೆ ಕಾವಲು ಕಾಯುತ್ತಿದೆ.
ಮುಂಜಾಗ್ರತ ಕ್ರಮವಾಗಿ ಪೂರ್ತಿ ಬೆಂಗಳೂರಿನಲ್ಲಿ ಸೆಕ್ಷನ್ 144 ಹಾಕಲಾಗಿದೆ.

https://twitter.com/CPBlr/status/1293346856647327744?s=19

Bangalore Hot News