ಬೆಂಗಳೂರು: ಕರೊನಾ ವೈರಸ್‌ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ ನಿರ್ಬಂಧ ವಿಧಿಸಿತ್ತು.

ಆದರೆ ಮುಂಬೈ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಕೆಲವೊಂದು ಷರತ್ತುಗಳನ್ನು ವಿಧಿಸುವ ಮೂಲಕ ಉತ್ಸವಕ್ಕೆ ಅವಕಾಶ ನೀಡಿರುವಾಗ ರಾಜ್ಯದಲ್ಲಿ ಏಕಿಲ್ಲ ಎಂಬ ಬಗ್ಗೆ ಅಪಾರ ಟೀಕೆ ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು, ಗಣೇಶ ಭಕ್ತರ ಕೋರಿಕೆಗೆ ಮಣಿದು, ಸಾರ್ವಜನಿಕ ಉತ್ಸವಕ್ಕೆ ಹಸಿರು ನಿಶಾನೆ ತೋರಿದ್ದಾರೆ.

ಗಣೇಶೋತ್ಸವಕ್ಕೆ ಸಂಬಂಧಪಟ್ಟಂತೆ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದ್ದು, ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿಯನ್ನು ನೀಡಲಾಗಿದೆ

ಈ ಬಗ್ಗೆ ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಕರೊನಾ ಪರಿಸ್ಥಿತಿ ಹಿನ್ನೆಲೆ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರಕಾರ ಮಾರ್ಗಸೂಚಿಗಳನ್ನು ರೂಪಿಸಿದೆ

ಕರೊನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಬೇಕು ಎಂದು ಮನವಿ ಮಾಡಿದ್ದಾರೆ.

Bangalore Hot News