ಗಣೇಶ ಮತ್ತು ಮೊಹರಂ ಹಬ್ಬ : ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪನೆ ನಿಷೇಧ
ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಈ ಬಾರಿಯ ಗಣೇಶ ಹಬ್ಬ ಅಂಗವಾಗಿ ಸಾರ್ವಜನಿಕವಾಗಿ ಗಣೇಶ ಮೂರ್ತಿಯನ್ನು ಹಾಗೂ ಮೊಹರಂ ಹಬ್ಬದ ಅಂಗವಾಗಿ ತಾಬೂತು (ಪಂಜಾ) ಪ್ರತಿಷ್ಠಾಪಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಆದೇಶ ಹೊರಡಿಸಿದ್ದಾರೆ.
ಗಣೇಶ ಹಬ್ಬ ಅಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳ ಸ್ಥಾಪನೆ, ಮೆರವಣಿಗೆ, ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಪದ್ಧತಿ ಮೊದಲಿನಿಂದಲೂ ರೂಢಿಯಲ್ಲಿತ್ತು. ಅಲ್ಲದೆ ಮೊಹರಂ ಹಬ್ಬದ ಅಂಗವಾಗಿ ತಾಬೂತು (ಪಂಜಾ) ಗಳನ್ನು ಸಾರ್ವಜನಿಕವಾಗಿ ಪ್ರತಿಷ್ಠಾಪಿಸುವುದು, ಮೆರವಣಿಗೆಯ ಆಚರಣೆ ಜಾರಿಯಲ್ಲಿತ್ತು. ಜಿಲ್ಲೆಯಲ್ಲಿ ಕಳೆದ ಬಾರಿಯ ಗೌರಿ ಗಣೇಶ ಹಬ್ಬ ಅಂಗವಾಗಿ 2499 ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿತ್ತು. ಆದರೆ ಈ ಬಾರಿ ಕೋವಿಡ್-19 ವೈರಸ್ ಹರಡುವು ಭೀತಿ ವ್ಯಾಪಕವಾದೆ. ಜಿಲ್ಲೆಯಲ್ಲಿ ಸದ್ಯ 3830 ಕೋವಿಡ್ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ 1247 ಪ್ರಕರಣಗಳು ಸಕ್ರಿಯವಾಗಿವೆ. 324 ಸಕ್ರಿಯ ಕಂಟೈನ್‍ಮೆಂಟ್ ವಲಯಗಳು ಜಿಲ್ಲೆಯಲ್ಲಿ ಸಕ್ರಿಯವಾಗಿವೆ. ಅಲ್ಲದೆ ಪೊಲೀಸ್ ಸೇರಿದಂತೆ ಹಲವು ನೌಕರರು ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ.
ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಕಂಟೈನ್‍ಮೆಂಟ್ ವಲಯ ಹಾಗೂ ಕಂಟೈನ್‍ಮೆಂಟ್ ಹೊರತುಪಡಿಸಿದ ಪ್ರದೇಶಗಳಲ್ಲಿ ಅನುಸರಿಸಬೇಕಾದ ಕಟ್ಟುನಿಟ್ಟಿನ ಕ್ರಮಗಳ ಕುರಿತು ಈಗಾಗಲೆ ಕಳೆದ ಜುಲೈ 03 ರಂದು ಮಾರ್ಗಸೂಚಿ ಪ್ರಕಟಿಸಿದೆ. ಇದರನ್ವಯ ಯಾವುದೇ ಸಾಮಾಜಿಕ, ರಾಜಕೀಯ, ಕ್ರೀಡೆ, ಮನೋರಂಜನೆ, ಶೈಕ್ಷಣಿಕ, ಸಾಂಸ್ಕøತಿಕ, ಧಾರ್ಮಿಕ ಕಾರ್ಯಕ್ರಮಗಳು ಅಲ್ಲದೆ ಇತರೆ ಬೃಹತ್ ಸಭೆ ಸಮಾರಂಭಗಳಿಗೆ ಅನುಮತಿ ಇರುವುದಿಲ್ಲ. ಈ ಮಾರ್ಗಸೂಚಿಯು ಆಗಸ್ಟ್ 31 ರವರೆಗೂ ಜಾರಿಯಲ್ಲಿರುತ್ತದೆ.
ಇದೇ ಆಗಸ್ಟ್ 21 ರಂದು ಗೌರಿ ಹಬ್ಬ ಹಾಗೂ ಆ. 22 ರಂದು ಗಣೇಶ ಹಬ್ಬ ಪ್ರಾರಂಭವಾಗಲಿದ್ದು ಜಿಲ್ಲೆಯಲ್ಲಿ ಸುಮಾರು 30 ದಿನಗಳ ಕಾಲ ಗಣೇಶ ಹಬ್ಬ ಆಚರಿಸುವ ಸಂಭವವಿರುವುದರಿಂದ ಅಲ್ಲದೆ ಆ. 30 ರಂದು ಮೊಹರಂ ಹಬ್ಬದ ಕೊನೆಯ ದಿನ ಇರುವುದರಿಂದ, ಈ ಸಂದರ್ಭಗಳಲ್ಲಿ ಸಾರ್ವಜನಿಕ ಧಾರ್ಮಿಕ ಚಟುವಟಿಕೆಗಳಿಗೆ ಅವಕಾಶ ನೀಡಿದಲ್ಲಿ ಸರ್ಕಾರದ ಮಾರ್ಗಸೂಚಿಯ ಉಲ್ಲಂಘನೆಯಾಗಲಿದೆ. ಜೊತೆಗೆ ಕೋವಿಡ್ ಸೋಂಕು ಇನ್ನಷ್ಟು ವ್ಯಾಪಕವಾಗಿ ಹರಡುವ ಭೀತಿ ಇರುತ್ತದೆ.
ಇದೇ ಆಗಸ್ಟ್ 21 ರಂದು ಗೌರಿ ಹಬ್ಬ ಹಾಗೂ ಆ. 22 ರಂದು ಗಣೇಶ ಹಬ್ಬ ಪ್ರಾರಂಭವಾಗಲಿದ್ದು ಜಿಲ್ಲೆಯಲ್ಲಿ ಸುಮಾರು 30 ದಿನಗಳ ಕಾಲ ಗಣೇಶ ಹಬ್ಬ ಆಚರಿಸುವ ಸಂಭವವಿರುವುದರಿಂದ ಅಲ್ಲದೆ ಆ. 30 ರಂದು ಮೊಹರಂ ಹಬ್ಬದ ಕೊನೆಯ ದಿನ ಇರುವುದರಿಂದ, ಈ ಸಂದರ್ಭಗಳಲ್ಲಿ ಸಾರ್ವಜನಿಕ ಧಾರ್ಮಿಕ ಚಟುವಟಿಕೆಗಳಿಗೆ ಅವಕಾಶ ನೀಡಿದಲ್ಲಿ ಸರ್ಕಾರದ ಮಾರ್ಗಸೂಚಿಯ ಉಲ್ಲಂಘನೆಯಾಗಲಿದೆ. ಜೊತೆಗೆ ಕೋವಿಡ್ ಸೋಂಕು ಇನ್ನಷ್ಟು ವ್ಯಾಪಕವಾಗಿ ಹರಡುವ ಭೀತಿ ಇರುತ್ತದೆ.
ಈ ಹಿನ್ನೆಲೆಯಲ್ಲಿ ಈ ಬಾರಿ ಗಣೇಶ ಹಬ್ಬ ಅಂಗವಾಗಿ ಸಾರ್ವಜನಿಕವಾಗಿ ಯಾವುದೇ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಹಾಗೂ ಮೊಹರಂ ಹಬ್ಬದ ಅಂಗವಾಗಿ ತಾಬೂತು (ಪಂಜಾ) ಪ್ರತಿಷ್ಠಾಪಿಸುವುದನ್ನು ನಿಷೇಧಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ, ಗ್ರಾಮ ಪಂಚಾಯತಿಗಳು, ಲೋಕೋಪಯೋಗಿ, ಬೆಸ್ಕಾಂ ಸೇರಿದಂತೆ ಯಾವುದೇ ಇಲಾಖೆಗಳು ಯಾವುದೇ ಅನುಮತಿ ನೀಡದಂತೆ ಹಾಗೂ ಆದೇಶ ಪಾಲನೆ ಮಾಡುವಂತೆ ಆದೇಶಿಸಲಾಗಿದೆ.
ಕಾನೂನು ಬಾಹಿರವಾಗಿ ಪಿಒಪಿ ಗಣಪತಿ ಮೂರ್ತಿಗಳ ತಯಾರಕರ ಮೇಲೆ ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಹಾಗೂ ಸ್ಥಳೀಯ ಸಂಸ್ಥೆಗಳು ನಿಯಮಾನುಸಾರ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಜಿಲ್ಲೆಯಲ್ಲಿ ಗಣೇಶ ಮತ್ತು ಮೊಹರಂ ಹಬ್ಬದ ಸಂಬಂಧ ಯಾವುದೇ ಮೆರವಣಿಗೆ, ರ್ಯಾಲಿ, ಜಾಥಾ, ಕಾರ್ಯಕ್ರಮಗಳಿಗೆ ಹಾಗೂ ಡಿಜೆ ಸೌಂಡ್ ಸಿಸ್ಟಂ ಬಳಸಲು ಅನುಮತಿ ಇರುವುದಿಲ್ಲ. ಈ ಆದೇಶಗಳ ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 188 ಮತ್ತು 270, ವಿಪತ್ತು ನಿರ್ವಹಣಾ ಕಾಯ್ದೆಗಳನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.
Bangalore Hot News
0 Comments
Please share your comment