karnatak COVID updates

ಬೆಂಗಳೂರು : ರಾಜ್ಯದಲ್ಲಿ ಇಂದು ಕೂಡ ಕೊರೋನಾ ಅಬ್ಬರ ಮುಂದುವರೆದಿದ್ದು 6317 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮಹಾಮಾರಿಗೆ ಇಂದು ಅತಿ ಹೆಚ್ಚು ಅಂದರೆ 115 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 233283 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 4062ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 2053 ಜನರಿಗೆ ಕೊರೋನಾ ತಗುಲಿದ್ದು, 39 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 91864 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ 1483 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 7071 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 148562 ಜನ ಗುಣಮುಖರಾಗಿದ್ದಾರೆ.

ಉಳಿದಂತೆ 80643 ಸಕ್ರಿಯ ಕೇಸ್​ಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ. ಇದರಲ್ಲಿ 695 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯಂತೆ 37700 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 2075086 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ.


 ಜಿಲ್ಲಾವಾರು ಇಂದು ಪತ್ತೆಯಾದ ಸೋಂಕಿತರ ಸಂಖ್ಯೆ ಈ ಕೆಳಕಂಡಂತಿದೆ :

BHN


Bangalore Hot News