ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಕ್ಯಾಪ್ಟನ್ ಎಂ.ಎಸ್ ಧೋನಿ

Ms Dhoni


ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ವಿದಾಯ ಘೋಷಿಸಿದ್ದಾರೆ.

ಈ ಕುರಿತು ಧೋನಿ ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು ಎಂದು ಇದೇ ವೇಳೆ ಅಭಿಮಾನಿಗಳಿಗೆ ತಿಳಿಸಿದ್ದಾರೆ.

ಭಾರತೀಯ ಕ್ರಿಕೆಟ್ ತಂಡದ ನಾಯಕರಾಗಿ ಇವರು ಎರಡು ಬಾರಿ ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದರು. ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದರೂ ಮುಂದಿನ ಐಪಿಎಲ್ ನಲ್ಲಿ ಆಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಎಂ.ಎಸ್ ಧೋನಿ ಪದಾರ್ಪಣೆ ಮಾಡಿದ್ದರು. ಧೋನಿ ನೇತೃತ್ವದಲ್ಲಿ ಭಾರತ 2008ರ ಟಿ20 ವಿಶ್ವಕಪ್ ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಕಪ್ ಗೆದ್ದು ಬೀಗಿತ್ತು.

ಮಾತ್ರವಲ್ಲದೆ ಯಶಸ್ವಿ ನಾಯಕರಾಗಿ ಮತ್ತು ವಿಕೇಟ್ ಕೀಪರ್ ಆಗಿ ತಂಡದಲ್ಲಿ ಗುರುತಿಸಿಕೊಂಡಿದ್ದರು.

Bangalore Hot News