Nirbhaya case


ಹೊಸದಿಲ್ಲಿ: ದೇಶವನ್ನೇ ಬೆಚ್ಚಿಬೀಳಿಸಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳ ಪರವಾಗಿ ಹೋರಾಡಿದ್ದ ಎ.ಪಿ ಸಿಂಗ್ ಇದೀಗ ದೇಶದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿರುವ ಹತ್ರಸ್ ಅತ್ಯಾಚಾರ-ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ನ್ಯಾಯಾಲಯದಲ್ಲಿ ಸಮರ್ಥಿಸಿಕೊಳ್ಳಲಿದ್ದಾರೆ.

ಹತ್ರಸ್ ಆರೋಪಿಗಳ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಲು ಸಿಂಗ್ ಅವರನ್ನು ಮೇಲ್ಜಾತಿಯ ಗುಂಪು ಅಖಿಲ ಭಾರತೀಯ ಕ್ಷತ್ರೀಯ ಮಹಾಸಭಾ ನೇಮಕ ಮಾಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಬೋಬ್ಡೆ ನೇತೃತ್ವದ ನ್ಯಾಯಪೀಠವು ನಾಳೆ ಹತ್ರಸ್ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನ್ಯಾಯಾಂಗ ತನಿಖೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲಿದೆ.

ವಿಚಾರಣೆಯ ಸ್ಥಳವನ್ನು ಉತ್ತರಪ್ರದೇಶದಿಂದ ದಿಲ್ಲಿಗೆ ಬದಲಾಯಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

 #hatrasha.
#Justice_for_Manisha
#justice
#manisha
#ManishaValmiki
#JusticeForManishaValmiki
 
Bangalore Hot News