ವಿಚಾರಣೆಗೆ ಹಾಜರಾದ ಹಂಸಲೇಖ |BHN|
ಬೆಂಗಳೂರು: ನಾದಬ್ರಹ್ಮ ಹಂಸಲೇಖ ನೀಡಿದ್ದ ಹೇಳಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ಅವರಿಗೆ ನೋಟೀಸ್ ನೀಡಲಾಗಿತ್ತು. ಇಂದು (ನವೆಂಬರ್ 25) ಅವರು ಬಸವನಗುಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಈ ವೇಳೆ ಹಂಸಲೇಖ ಅವರೊಂದಿಗಿರುವುದಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಓಡೋಡಿ ಬಂದಿದ್ದಾರೆ. ಬಸವನಗುಡಿ ಪೊಲೀಸ್ ಠಾಣೆಯ ಮುಂದೆ ಸೇರಿದ್ದ ಗುಂಪನ್ನು ಚದುರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.ಠಾಣೆಯ ಮುಂದೆ ಹಂಸಲೇಖ ಪರ- ವಿರೋಧ ಪ್ರತಿಭಟನೆ ನಡೆಯುತ್ತಿದೆ. ಎರಡೂ ಗುಂಪುಗಳನ್ನು ಚದುರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಭಜರಂಗದಳವು ನಟ ಚೇತನ್ ಮಧ್ಯಪ್ರವೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ನಟ ಚೇತನ್ ಕನ್ನಡಪರ ಸಂಘಟನೆಗಳ ಸರ್ಪಗಾವಲಿನಲ್ಲಿ ಠಾಣೆಗೆ ಆಗಮಿಸಿದ್ದಾರೆ.
0 Comments
Please share your comment